ಛಲವಾದಿ ಸಂಘದಿಂದ ಪುರಸ್ಕಾರ

Published on

ಹುಬ್ಬಳ್ಳಿ: ಇಲ್ಲಿಯ ಛಲವಾದಿ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಸುವರ್ಣ ಸಂವತ್ಸರ ಪೂರೈಸಿದ ದಂಪತಿಗೆ ಸನ್ಮಾನ ಸಮಾರಂಭವನ್ನು ಆ. 11ರಂದು ಬೆಳಗ್ಗೆ 11ಕ್ಕೆ ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಭವನದಲ್ಲಿ ಏರ್ಪಡಿಸಲಾಗಿದೆ.

ಶಾಸಕ ಪ್ರಸಾದ ಅಬ್ಬಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕಾನೂನು ವಿವಿ ಕುಲಪತಿ ಪ್ರೊ. ಸಿ. ಬಸವರಾಜು, ಅಪರ ಜಿಲ್ಲಾಧಿಕಾರಿ ಗೀತಾ ದೊಡ್ಡಮನಿ, ಶಿವಪುತ್ರ ಹೊನ್ನಳ್ಳಿ, ಡಾ. ಭೀಮರಾವ ವಾಡಿಕರ, ಡಾ. ಸೋಮಶೇಖರ ಕಡೂರ ಅತಿಥಿಗಳಾಗಿ ಪಾಲ್ಗೊಳ್ಳುವರು.

ಸಂಘದ ಅಧ್ಯಕ್ಷ ಡಾ. ಎಸ್.ಕೆ. ವಾಸುದೇವ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net