ಸೌಲಭ್ಯ ಅರಿವು ಜನರಲ್ಲಿ ಮೂಡಿಸಬೇಕು

CLK SABHE 30
Published on

ಚಳ್ಳಕೆರೆ: ಸೇವಾಲಾಲ್ ಜಯಂತಿಯಂದು ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಗೊಂಡು ಸಾಮಾಜಿಕ ಸಮಸ್ಯೆಗಳಿಗೆ ಸರ್ಕಾರದ ಗಮನ ಸೆಳೆಯಬೇಕು ಎಂದು ತಾಲೂಕು ಬಂಜಾರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ ಮನವಿ ಮಾಡಿದರು.

ಸೇವಾಲಾಲ್ ಜಯಂತಿ ಅಂಗವಾಗಿ ಬುಧವಾರ ವೆಂಕಟೇಶ್ವರ ನಗರದಲ್ಲಿ ಆಯೋಜಿಸಿದ್ದ ಬಂಜಾರ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು.

ತಾಲೂಕಿನ ಲಂಬಾಣಿ ತಾಂಡಾಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಬಹುತೇಕ ಕುಟುಂಬಗಳಿಗೆ ಈತನಕ ಜಮೀನು ಮತ್ತು ನಿವೇಶನದ ಹಕ್ಕುಪತ್ರ ಸಿಕ್ಕಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿ ಸಮಾಜದವರು ಜಯಂತ್ಯುತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಪುರಸಭೆ ಮಾಜಿ ಸದಸ್ಯ ಲೋಕೇಶ್‌ನಾಯ್ಕ್ಕ, ಸೇವಾಲಾಲ್ ಸಮಿತಿ ಸದಸ್ಯರಾದ ರಂಗಸ್ವಾಮಿ, ವೆಂಕನಾಯ್ಕ, ಅರುಣ್‌ಕುಮಾರ್, ಯಶವಂತನಾಯ್ಕ, ಪುರುಷೋತ್ತಮ ನಾಯ್ಕ, ಗೋವಿಂದನಾಯ್ಕ, ರಾಮನಾಯ್ಕ, ರವಿಕುಮಾರ್, ಜಗದೀಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net