ಪ್ರತಿಭಟನೆ ಹತ್ತಿಕ್ಕುವುದು ಸಲ್ಲದು

anganavadi download
Published on

ಚಳ್ಳಕೆರೆ: ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರ ಪ್ರಜಾಸತ್ತಾತ್ಮಕ, ಸಂವಿಧಾನಾತ್ಮಕ ಹೋರಾಟಗಳ ಮೇಲಿನ ನಿಷೇಧ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಅಂಗನವಾಡಿ ನೌಕರರ ಸಂಘ ಮತ್ತು ಸಿಐಟಿಯು ಸಂಘಟನೆ ಕಾರ್ಯಕರ್ತರು ತಾಲೂಕು ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದರು.

ಶಾಲಾ ಪೂರ್ವ ಶಿಕ್ಷಣ ವ್ಯವಸ್ಥೆಯನ್ನು ಅಂಗನವಾಡಿ ಕೇಂದ್ರಗಳಲ್ಲಿ ಉಳಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಸೇವಾ ಭದ್ರತಾ ಬೇಡಿಕೆಗಳಿಗೆ ಆಗ್ರಹಿಸಿ ತುಮಕೂರಿನಿಂದ ಬೆಂಗಳೂರಿನ ತನಕ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಸರ್ಕಾರ ನಿಷೇಧಾಜ್ಞೆ ಜಾರಿ ಮಾಡಿದೆ ಎಂದರು.

ಶಾಲಾ ಪೂರ್ವ ಶಿಕ್ಷಣದಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವ ಯೋಜನೆ ಜಾರಿ ಮಾಡಬೇಕು. ತಜ್ಞರ ಸಲಹೆ ಮೇರೆಗೆ ಸಮವಸ್ತ್ರ ಮತ್ತು ಪಠ್ಯಕ್ರಮ ನಿಗದಿ ಮಾಡಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಅನುಕೂಲ ಕಲ್ಪಿಸಬೇಕು ಎಂದು ಅಂಗನವಾಡಿ ಸಂಘಟನೆಯ ಎಚ್.ಇಂದ್ರಮ್ಮ, ಜಯಲಕ್ಷ್ಮೀ, ಜಿ.ಗಂಗಮ್ಮ, ಬಿ.ಬೋರಮ್ಮ, ಸಿಐಟಿಯು ಸಂಘಟನೆಯ ಟಿ.ತಿಪ್ಪೇಸ್ವಾಮಿ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net