

ಚಳ್ಳಕೆರೆ: ಹೊರ ದೇಶ, ರಾಜ್ಯದಿಂದ ಗ್ರಾಮಗಳಿಗೆ ಬರುವ ಪ್ರಯಾಣಿಕರ ಬಗ್ಗೆ ನಿಗಾ ವಹಿಸಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ಎನ್.ಪ್ರೇಮಸುಧಾ ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಬುಧವಾರ, ಮೇಲ್ವಿಚಾರಕರಿಗೆ ಕರೊನಾ ವೈರಸ್ ಜಾಗೃತಿ ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಈಗಾಗಲೇ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ನೀಡಲಾಗಿದೆ. ಕಲಬುರಗಿ, ಬೆಂಗಳೂರಿನಿಂದ ಗ್ರಾಮಗಳಿಗೆ ಬರುವವರ ಮಾಹಿತಿ ಸಂಗ್ರಹಿಸಬೇಕು ಎಂದರು.
ಆರೋಗ್ಯ ನಿರೀಕ್ಷಕ ಎ.ಗಂಗಾಧರ ಮಾತನಾಡಿ, ಆಂಧ್ರದಿಂದ ತಾಲೂಕಿನ ಓಬಳಾಪುರ, ಕಡೇವುಡೆ, ನಾಗಪ್ಪನಹಳ್ಳಿ ಗೇಟ್, ಪಿ.ಮಹಾದೇವಪುರ ಇತರ ಗ್ರಾಮಗಳಿಗೆ ಬರುವವರ ಬಗ್ಗೆ ಹೆಚ್ಚಿನ ನಿಗಾ ವಹಿಸಲು ಆಶಾ ಕಾರ್ಯಕತೆಯರ ಜತೆಗೆ ಹಿರಿಯ ಮಹಿಳಾ ಆರೋಗ್ಯ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಚಳ್ಳಕೆರೆ ತಾಲೂಕಿನ ಆಂಧ್ರ ಗಡಿಭಾಗದ 5 ಕಡೆ ಹೊರ ರಾಜ್ಯದಿಂದ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯ ಐದು ತಂಡ ರಚಿಸಲಾಗಿದೆ ಎಂದರು.
ಸಿಡಿಪಿಒ ಮೋಹನ್‌ಕುಮಾರಿ, ಪ್ರಭಾರ ತಾಲೂಕು ಆರೋಗ್ಯ ನಿರೀಕ್ಷಕ ಎಸ್.ಬಿ.ತಿಪ್ಪೇಸ್ವಾಮಿ, ಆರೋಗ್ಯ ನಿರೀಕ್ಷಕ ಎಂ.ಪ್ರಸನ್ನಕುಮಾರ್ ಮತ್ತಿತರರಿದ್ದರು.