ಜಯಮ್ಮಗೆ ಅವಕಾಶ ಕಲ್ಪಿಸಲು ಒತ್ತಾಯ

CLK MLC 10
Published on

ಚಳ್ಳಕೆರೆ: ಕಾಡುಗೊಲ್ಲ ಸಮುದಾಯದ ಸಾಮಾಜಿಕ ಸಮಸ್ಯೆಗಳಿಗೆ ಉತ್ತಮವಾಗಿ ಸ್ಪಂದಿಸುತ್ತಿರುವ ವಿಧಾನ ಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್ ಅವರನ್ನು ಮತ್ತೊಂದು ಅವಧಿಗೆ ಮುಂದುವರಿಸಬೇಕು ಎಂದು ತಾಲೂಕಿನ ಗೊಲ್ಲ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ರಾಜ್ಯದ ಕಾಡುಗೊಲ್ಲ ಸಮಾಜವನ್ನು ಸಂಘಟಿಸಿ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಕೆಲಸ ಮಾಡಿದ್ದಾರೆ ಎಂದರು.

ಸಾಮಾಜಿಕ ಬದಲಾವಣೆಗಾಗಿ ಎಸ್ಟಿ ಸಮುದಾಯಕ್ಕೆ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿಸಿದ್ದಾರೆ. ಅರೆಅಲೆಮಾರಿ ಕುಟುಂಬಗಳಿಗೆ ವಸತಿ ಸೌಕರ್ಯ ಸೇರಿ ವಿವಿಧ ಸೌಲಭ್ಯಗಳ ಅನುಕೂಲಕ್ಕಾಗಿ ಕೆಲ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿಸುವಲ್ಲಿ ಶ್ರಮಿಸಿದ್ದಾರೆ. ಆದ್ದರಿಂದ ಜಯಮ್ಮ ಮುಂದುವರಿಸಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ಘಟಪರ್ತಿ ವೀರಭದ್ರಪ್ಪ, ಸತ್ಯಣ್ಣ, ರಾಮಣ್ಣ, ಹೊನ್ನೂರು ಕೆರಿಟಪ್ಪ, ಬೂದಿಹಳ್ಳಿರಾಜು, ಓಲಗೇನಪ್ಪ, ತಿಪ್ಪೇಸ್ವಾಮಿ, ಯರ‌್ರಿಸ್ವಾಮಿ, ಲೋಕೇಶ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net