ಗಡಿಭಾಗದ ಶಾಲೆಗಳಲ್ಲಿ ಕೊರತೆ ಇಲ್ಲ

BEO VENKATESHAPPA
Published on

ಚಳ್ಳಕೆರೆ: ತಾಲೂಕಿನ ಗಡಿಭಾಗದ ಶಾಲೆಗಳಿಗೆ ಶಿಕ್ಷಕರ ನಿಯೋಜನೆ ಸೇರಿ ಮೂಲ ಸೌಕರ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ ಮಾಡಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ವೆಂಕಟೇಶ್ ತಿಳಿಸಿದ್ದಾರೆ.

ಓಬಳಾಪುರ ಸರ್ಕಾರಿ ಪ್ರೌಢಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಅಧಿಕಾರಿಗಳು ಆಸಕ್ತಿ ತೋರಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಆದರೆ, 2018ರ ಶಿಕ್ಷಕರ ನೇಮಕಾತಿಯಲ್ಲಿ ತಾಲೂಕಿಗೆ ನಿಯೋಜನೆಗೊಂಡ 30 ಶಿಕ್ಷಕರಲ್ಲಿ 25 ಮತ್ತು 2020ರಲ್ಲಿ ನೇಮಕಗೊಂಡ 52 ಮಂದಿಯಲ್ಲಿ 30 ಶಿಕ್ಷಕರನ್ನು ಗಡಿಭಾಗದ ಶಾಲೆಗಳಿಗೆ ನೇಮಕ ಮಾಡಲಾಗಿದೆ.

ಮುಖ್ಯಶಿಕ್ಷಕರ ಹುದ್ದೆಗಳಿಗೆ ಸರ್ಕಾರದ ಹಂತದಲ್ಲಿ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಈ ಕಾರಣ ಓಬಳಾಪುರ ಪ್ರೌಢಶಾಲೆಯ ಖಾಲಿ ಮುಖ್ಯ ಶಿಕ್ಷಕರ ಹುದ್ದೆ ಭರ್ತಿಗೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net