ಮಡಿವಾಳರನ್ನು ಎಸ್ಸಿ ಪಟ್ಟಿಗೆ ಸೇರಿಸಬೇಕು

CLK JAYANTHI 01
Published on

ಚಳ್ಳಕೆರೆ: ಮಡಿವಾಳ ಮಾಚಿದೇವ ಅವರು ವಚನಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ನಗರದ ದಲ್ಲಾಲ ಸಮುದಾಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಾಡಿವಾಳ ಮಾಚಿದೇವ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.

ಕಾಯಕ ನಿಷ್ಠೆ ಹೊಂದಿದ್ದ ಮಾಚಿದೇವರು ಅಲ್ಲಮಪ್ರಭು ಮತ್ತು ಬಸವೇಶ್ವರರ ಪ್ರೀತಿ ಗಳಿಸಿದ್ದರು. ಅವರ ಆದರ್ಶವನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕೆಂದು ಹೇಳಿದರು.

ಮಡಿವಾಳ ಸಮಾಜವನ್ನು ಎಸ್ಸಿಗೆ ಸೇರಿಸಬೇಕೆಂಬ ಹೋರಾಟ ತೀವ್ರಗೊಂಡಿದೆ. ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಸಮಸ್ಯೆಗೆ ಸ್ಪಂದಿಸುವ ಪ್ರಯತ್ನ ಮಾಡಲಾಗಿತ್ತು. ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳಿಸುವಂತೆ ಒತ್ತಡ ಹಾಕುವುದಾಗಿ ಭರವಸೆ ನೀಡಿದರು.

ಮಡಿವಾಳ ಸಂಘದ ತಾಲೂಕಾಧ್ಯಕ್ಷ ಎನ್.ಮಂಜುನಾಥ ಮಾತನಾಡಿ, ದೇಶದ 18 ರಾಜ್ಯಗಳಲ್ಲಿ ಸಮುದಾಯವನ್ನು ಎಸ್ಸಿಗೆ ಸೇರಿಸಲಾಗಿದೆ. ರಾಜ್ಯದಲ್ಲಿ ನಿರಂತರವಾಗಿ ಪ್ರತಿಭಟನೆ ಮಾಡಿದರೂ ಪ್ರಯೋಜನವಾಗುತ್ತಿಲ್ಲ ಎಂದು ಬೇಸರಿಸಿದರು.

ತಹಸೀಲ್ದಾರ್ ಎಂ.ಮಲ್ಲಿಕಾರ್ಜುನಪ್ಪ, ಗ್ರಾಪಂ ಸದಸ್ಯೆ ಶೈಲಜಾ, ನಗರಸಭೆ ಸದಸ್ಯರಾದ ಟಿ.ಮಲ್ಲಿಕಾರ್ಜುನ, ಬಿ.ಟಿ.ರಮೇಶ್‌ಗೌಡ, ತಾಪಂ ಸದಸ್ಯ ಜಿ.ವೀರೇಶ್, ಮುಖಂಡರಾದ ರಾಜಪ್ಪ, ಆರ್.ರವಿಕುಮಾರ್, ದೊಡ್ಡರಂಗಪ್ಪ, ಎಂ.ನಾಗರಾಜ, ಎನ್.ವೀರೇಶ್, ಕಲಾವಿದ ನಾಗೇಂದ್ರಪ್ಪ, ಸಿ.ಕುಶಾಲಪ್ಪ, ಮಾಚಿಪ್ರಭು ವೀರಣ್ಣ ದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net