ಸಂವಿಧಾನದಿಂದ ಸರ್ವರಿಗೂ ಸಮಾನವಕಾಶ

CLK JAYANTHI 14
Published on

ಚಳ್ಳಕೆರೆ: ಸಂವಿಧಾನದ ಆಶಯದಂತೆ ಸಾಮಾಜಿಕ ಸಮಾನತೆಗಾಗಿ ಆಡಳಿತ ಸರ್ಕಾರಗಳು ಕಾನೂನುಗಳನ್ನು ಜಾರಿ ಮಾಡಬೇಕು ಎಂದು ಶಾಸಕ ಟಿ. ರಘುಮೂರ್ತಿ ತಿಳಿಸಿದರು.

ತಾಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಂಗಳವಾರ ಆಚರಿಸಲಾದ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.

ಸಂವಿಧಾನದಲ್ಲಿ ಸರ್ವರಿಗೂ ಸಮಾನ ಅವಕಾಶ ಕಲ್ಪಿಸಲಾಗಿದೆ. ಸಾಮಾಜಿಕ ಸಮಾನತೆ ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು. ಶಿಕ್ಷಣ, ಸಂಘಟನೆ, ಹೋರಾಟದಿಂದ ಅಸ್ತಿತ್ವ ಕಾಪಾಡಿಕೊಳ್ಳಬೇಕು ಎಂದರು.

ತಹಸೀಲ್ದಾರ್ ಎಂ. ಮಲ್ಲಿಕಾರ್ಜುನ, ಜಿಪಂ ಸದಸ್ಯ ಬಿ.ಪಿ. ಪ್ರಕಾಶ್‌ಮೂರ್ತಿ, ತಾಪಂ ಸದಸ್ಯ ಎಚ್. ಸಮರ್ಥರಾಯ್, ನಗರಸಭೆ ಸದಸ್ಯರಾದ ಕೆ. ವೀರಭದ್ರಯ್ಯ, ಬಿ.ಟಿ. ರಮೇಶ್‌ಗೌಡ, ವೈ. ಪ್ರಕಾಶ್, ವಿರೂಪಾಕ್ಷಪ್ಪ, ಮುಖಂಡರಾದ ಕಿರಣಶಂಕರ್, ಓ. ಆಂಜಿನಪ್ಪ, ಪ್ರಹ್ಲಾದ್, ಜಿ. ಮಾರಣ್ಣ, ಟಿ. ವಿಜಯಕುಮಾರ್, ಭೀಮಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net