ಆಹಾರದ ಕಿಟ್ ವಿತರಣೆ

Published on

ಚಳ್ಳಕೆರೆ: ಕರೊನಾ ಸಾಂಕ್ರಾಮಿಕ ರೋಗ ನಿಯಂತ್ರಣ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತರ ಸೇವೆ ಮಹತ್ವವಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ತಾಲೂಕು ಪಂಚಾಯಿತಿ ಆವರಣದಲ್ಲಿ ಶನಿವಾರ ಪ್ರಗತಿಪರ ಶಿಕ್ಷಕರ ವೇದಿಕೆ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡಿ ಮಾತನಾಡಿದರು.

ಗೌರವ ಧನದ ಆಧಾರದ ಮೇಳೆ ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಆದರೂ, ಸರ್ಕಾರ ನಿಯೋಜನೆ ಮಾಡುವ ಕೆಲಸಗಳಲ್ಲಿ ಹೆಚ್ಚು ಬದ್ಧತೆಯಿಂದ ಕಾರ್ಯ ನಿರ್ವಹಿಸುವುದು ಕಾಣುತ್ತೇವೆ ಎಂದು ಹೇಳಿದರು. ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ, ಬಿಇಒ ಸಿ.ಎಸ್.ವೆಂಕಟೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ.ಚಿದಾನಂದಪ್ಪ, ಶಿಕ್ಷಕರಾದ ಆರ್.ಮಾರುತೇಶ್, ಡಿ.ಮಹಾಲಿಂಗಪ್ಪ, ಟಿ.ಮಾರಣ್ಣ, ಸಣ್ಣಸೂರಮ್ಮ, ಭೀಮಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net