ಖಾಸಗಿ ಕಂಪನಿ ಮುಚ್ಚಲು ಆಗ್ರಹ

CLK PRATIBHATANE 17
Published on

ಚಳ್ಳಕೆರೆ: ಸರ್ಕಾರಕ್ಕೆ ಕಂದಾಯ ಪಾವತಿ ಮಾಡದೆ ವಂಚನೆ ಮಾಡಿರುವ ತಾಲೂಕಿನ ನೇರ‌್ಲಗುಂಟೆ ಸಮೀಪ ಇರುವ ಖಾಸಗಿ ಕಂಪನಿಯನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಕರುನಾಡ ಜನ ಜಾಗೃತಿ ಹಿತ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಬಳಿಕ ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು.

ಸರ್ಕಾರದಿಂದ ಗುತ್ತಿಗೆ ಆಧಾರದ ಮೇಲೆ ಭೂಮಿ ಪಡೆದುಕೊಂಡು ಸೋಲಾರ್ ಪಾರ್ಕ್‌ನ್ನು ನಿರ್ಮಿಸಲಾಗಿದೆ. 1500ರಿಂದ 2 ಸಾವಿರ ಎಕರೆ ಭೂಮಿಯಲ್ಲಿ ಸೋಲಾರ್ ಅಳವಡಿಕೆ ಮಾಡಲಾಗಿದೆ. ಇದರಿಂದ ಉಷ್ಣಾಂಶ ಹೆಚ್ಚಾಗಿ ಅಂತರ್ಜಲ ಕುಸಿತವಾಗಿ ಎಂದು ದೂರಿದರು.

ಸುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಈ ಕಂಪನಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘಟನೆ ಅಧ್ಯಕ್ಷ ಬಿ.ಸಿ.ಮಂಜುನಾಥ, ಪ್ರಧಾನ ಕಾರ್ಯದರ್ಶಿ ಜಿ.ಆರ್.ಪ್ರಭಾಕರ್, ಜಿಲ್ಲಾ ಕಾರ್ಯದರ್ಶಿ ಎಸ್.ಎಲ್.ಶಿವರಾಜ್‌ಕುಮಾರ್, ಕಡೇಮನೆ ಪಾಂಡುರಂಗಪ್ಪ ಮತ್ತಿತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net