ಬಡ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳೇ ಆಧಾರ

CLK SIDDAPURA 17
Published on

ಚಳ್ಳಕೆರೆ: ಬಡ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳೇ ಆಧಾರ ಎಂದು ತಾಲೂಕು ಪಂಚಾಯಿತಿ ಸದಸ್ಯ ಗದ್ದಿಗೆ ತಿಪ್ಪೇಸ್ವಾಮಿ ಹೇಳಿದರು.

ತಾಲೂಕಿನ ಸಿದ್ದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಮಕ್ಕಳಿಗೆ 2ನೇ ಹಂತದ ಸಮವಸ್ತ್ರ ವಿತರಿಸಿ ಮಾತನಾಡಿದರು.

ದಿನಸಿ, ನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಜೀವನ ನಡೆಸುವುದು ಸಂಕಷ್ಟವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುವುದು ಕಷ್ಟಸಾಧ್ಯ. ಆದ್ದರಿಂದ ಅಗತ್ಯ ಸೌಕರ್ಯವಿರುವ ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ ಸುಸಂಸ್ಕೃತನನ್ನಾಗಿ ಮಾಡಬೇಕು ಎಂದು ಪಾಲಕರಲ್ಲಿ ಮನವಿ ಮಾಡಿದರು.

ಎಸ್‌ಡಿಎಂಸಿ ಅಧ್ಯಕ್ಷ ಭೂತರಾಜು, ಮುಖ್ಯಶಿಕ್ಷಕ ವೆಂಕಟೇಶ್ ರೆಡ್ಡಿ, ಶಿಕ್ಷಕರಾದ ಪುಷ್ಪಲತಾ, ತಿಪ್ಪಮ್ಮ, ಅನುಸೂಯಮ್ಮ, ಲಲಿತಮ್ಮ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net