

ಚಳ್ಳಕೆರೆ: ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳ ಶಿಕ್ಷಕರು, ಸಿಬ್ಬಂದಿಗೆ ಸರ್ಕಾರ ವೇತನ ನೀಡುವ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಡಾ.ಯೋಗೇಶ್‌ಬಾಬು ಒತ್ತಾಯಿಸಿದ್ದಾರೆ.
ಕರೊನಾ ಭೀತಿಯಿಂದ ಇದುವರೆಗೂ ಶೈಕ್ಷಣಿಕ ವರ್ಷ ಆರಂಭವಾಗಿಲ್ಲ. ರಾಜ್ಯದಲ್ಲಿ ಖಾಸಗಿ ಶಾಲೆಗಳ ವ್ಯವಸ್ಥೆಯಲ್ಲಿ 2 ಲಕ್ಷಕ್ಕೂ ಅಧಿಕ ಶಿಕ್ಷಕರು ನಿರ್ದಿಷ್ಟ ವೇತನ ಮತ್ತು ಭದ್ರತೆ ಇಲ್ಲದೆ ದುಡಿಯುತ್ತಿದ್ದಾರೆ. ಕೆಲವು ತಿಂಗಳಿನಿಂದ ವೇತನ ಇಲ್ಲದಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ಶಿಕ್ಷಕರು, ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಮನವಿ ಮಾಡಿದ್ದಾರೆ.