ಭಯ ಪಡಿಸಬೇಡಿ, ಜಾಗೃತಿ ಮೂಡಿಸಿ

CLK JATHA 21
Published on

ಚಳ್ಳಕೆರೆ: ಕರೊನಾ ಹರಡದಂತೆ ಕೈಗೊಂಡಿರುವ ಜಾಗೃತಿ ಕಾರ್ಯಕ್ರಮಗಳಲ್ಲಿ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿ ಜನರಲ್ಲಿ ಭಯಭೀತಿ ಇಲ್ಲದಂತೆ ಮಾಹಿತಿ ತಿಳಿಸುವ ಕೆಲಸ ಮಾಡಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ನಗರದಲ್ಲಿ ಶನಿವಾರ ತಾಲೂಕು ಆಡಳಿತ, ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಕರೊನ ವೈರಸ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ನಗರ ಸೇರಿ ತಾಲೂಕಿನ ಗಡಿಭಾಗಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಿದೆ. ಇತರೆ ರಾಜ್ಯಗಳಿಂದ ಬರುವವರ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಬೇಕು. ವೈರಸ್ ಬಗ್ಗೆ ಜನರಲ್ಲಿ ಭಯಭೀತರಾಗದಂತೆ ಸ್ವಚ್ಛತೆ ಕಾಪಾಡಿಕೊಂಡು ರಕ್ಷಣೆ ಮಾಡಿಕೊಳ್ಳುವ ಉಪಾಯಗಳನ್ನು ತಿಳಿಸಬೇಕು ಎಂದು ಹೇಳಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಎನ್.ಪ್ರೇಮಸುಧಾ ಮಾತನಾಡಿ, ಸಾರ್ವಜನಿಕ ಸ್ಥಳಗಳು ಸೇರಿ ಪ್ರತಿಹಳ್ಳಿಗಳಲ್ಲೂ ಜಾಗೃತಿ ಜಾಥಾ ಸಂಚರಿಸಲಿದೆ ಎಂದು ತಿಳಿಸಿದರು.

ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ, ಪೌರಾಯುಕ್ತ ಪಾಲಯ್ಯ, ಆರೋಗ್ಯ ಇಲಾಖೆಯ ಡಿ.ಚಿದಾನಂದಪ್ಪ, ಗಂಗಾಧರಪ್ಪ, ಎಸ್.ಬಿ. ತಿಪ್ಪೇಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net