ಸ್ವಚ್ಛತೆ ಕೈಗೊಳ್ಳದಿದ್ದರೆ ಕ್ರಮ ಖಚಿತ

CLK NAGARASABHE 14
Published on

ಚಳ್ಳಕೆರೆ: ಕರೊನ ಸಾಂಕ್ರಾಮಿಕ ರೋಗವಾಗಿದ್ದು, ಇದಕ್ಕೆ ಮುಂಜಾಗ್ರತೆಯೇ ಮದ್ದು. ಆದ್ದರಿಂದ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡುವಂತೆ ನಗರಸಭೆ ಸಿಬ್ಬಂದಿ ಶನಿವಾರ ನಗರದಲ್ಲಿ ಜಾಗೃತಿ ಮೂಡಿಸಿದರು.

ನಗರ ವ್ಯಾಪ್ತಿಯ ಹೋಟೆಲ್ ಮಾಲೀಕರಿಗೆ ತಿಳುವಳಿಕೆ ನೋಟೀಸ್ ನೀಡುವ ಮೂಲಕ ಸಾರ್ವಜನಿಕವಾಗಿ ರೋಗದ ಬಗ್ಗೆ ಜಾಗ್ರತೆ ವಹಿಸುವಂತೆ ತಿಳಿಸಿದರು.

ಹೋಟೆಲ್, ಅಂಗಡಿ ಮುಂಗಟ್ಟುಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೆಲಸ ನಿರ್ವಹಿಸುವ ಸಿಬ್ಬಂದಿ ಆರೋಗ್ಯದ ಕಡೆ ಗಮನ ಹರಿಸಬೇಕು. ಅನಾರೋಗ್ಯ ಇದ್ದಲ್ಲಿ ಆಸ್ಪತ್ರೆಗೆ ಸೇರಿಸಿ ರಜೆ ನೀಡಬೇಕು ಎಂದು ಸೂಚಿಸಿದರು.

ಬೀದಿಬದಿ ವ್ಯಾಪಾರಸ್ಥರಿಗೂ ಸ್ವಚ್ಛತೆ ಕುರಿತು ಕೆಲ ಸೂಚನೆ ನೀಡಿದರು. ನಗರಸಭೆ ಸೂಚನೆ ಉಲ್ಲಂಘಿಸಿದರೆ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net