ಅನಿಷ್ಟ ಪದ್ಧತಿ ನಿರ್ಮೂಲನೆ ಅಗತ್ಯ

CLK VITARANE 29
Published on

ಚಳ್ಳಕೆರೆ: ಸದೃಢ ಸಮಾಜ ನಿರ್ಮಾಣವಾಗಲು ಬಾಲ ಕಾರ್ಮಿಕ ಮತ್ತು ಬಾಲ್ಯ ವಿವಾಹ ಸೇರಿ ಅನಿಷ್ಟ ಪದ್ಧತಿಗಳು ನಿರ್ಮೂಲನೆ ಆಗಬೇಕು ಎಂದು ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್ ಹೇಳಿದರು.

ಕಾರ್ಮಿಕ ಇಲಾಖೆ, ಕಾನೂನು ಸೇವಾ ಸಮಿತಿ, ವಕೀಲರ ಸಂಘದಿಂದ ನಗರದ ಚಿತ್ರಯ್ಯನಹಟ್ಟಿಯಲ್ಲಿ ಇತ್ತೀಚೆಗೆ ಕಟ್ಟಡ ಕಾರ್ಮಿಕರಿಗೆ ಪಿಎಂ, ಎಂವೈಎಂ ಯೋಜನೆ ಕುರಿತು ಹಮ್ಮಿಕೊಂಡಿದ್ದ ಕಾನೂನು ಕಾರ್ಯಾಗಾರದಲ್ಲಿ ಮಾತನಾಡಿದರು.

ಕಾರ್ಮಿಕರ ಬದುಕಿನ ಭದ್ರತೆಗಾಗಿ ಪ್ರಧಾನಮಂತ್ರಿ ಶ್ರಮಯೋಗಿ ಮಾನಧನ ವಿಶೇಷ ಯೋಜನೆ ಜಾರಿ ಮಾಡಲಾಗಿದೆ. 18ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಕೊಳ್ಳಬೇಕು. ನೋಂದಾಯಿತ ಕಾರ್ಮಿಕರಿಗೆ ವಿವಿಧ ಸೌಲಭ್ಯ ಜತೆಗೆ ಆರೋಗ್ಯ ಕಾಪಾಡಿಕೊಳ್ಳುವ ಅನುಕೂಲಗಳು ಸಿಗಲಿವೆ. ಗುರುತಿನ ಚೀಟಿ ಪಡೆದುಕೊಳ್ಳುವ ಮೂಲಕ ಸೌಲಭ್ಯ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ನಗರಸಭೆ ಸದಸ್ಯರಾದ ಟಿ.ಶಿವಕುಮಾರ್, ಕವಿತಾ ಬೋರಯ್ಯ, ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಕೋಟೆಪ್ಪ ಕಾಂಬ್ಳೆ, ಸರ್ಕಾರಿ ಅಭಿಯೋಜಕ ಜೆ.ಲಿಂಗೇಶ್ವರ್, ತಾಲೂಕು ಕಾರ್ಮಿಕ ನಿರೀಕ್ಷಕ ಎಚ್.ಶಫೀವುಲ್ಲಾ, ವಕೀಲರ ಸಂಘದ ಅಧ್ಯಕ್ಷ ಕೆ.ಎಂ.ನಾಗರಾಜ, ವಕೀಲ ಕುರುಡಿಹಳ್ಳಿ ಶ್ರೀನಿವಾಸ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net