ಪಿಯುಸಿ ಮೌಲ್ಯ ಮಾಪನ ಬಹಿಷ್ಕಾರ

LAKSHMAN S
Published on

ಚಳ್ಳಕೆರೆ: ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೇತನ ತಾರತಮ್ಯ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದ್ವಿತೀಯ ಪಿಯುಸಿ ಮೌಲ್ಯ ಮಾಪನ ಬಹಿಷ್ಕರಿಸಲಾಗುವುದು ಎಂದು ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಲಕ್ಷ್ಮಣ್ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಜ.30ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಒಂದು ದಿನ ಸಾಂಕೇತಿಕ ಧರಣಿ ಹಮ್ಮಿಕೊಳ್ಳಲಾಗಿದೆ. ವೇತನ ತಾರತಮ್ಯ ಸರಿಪಡಿಸುವುದಾಗಿ ಸರ್ಕಾರ ನೀಡಿದ್ದ ಲಿಖಿತ ಭರವಸೆ ಕಾರ್ಯಗತಗೊಳಿಸಿಲ್ಲ. ಉಪನ್ಯಾಸಕರ ಹಿರಿತನ ಗುರುತಿಸಿ ಬಡ್ತಿ ಮಂಜೂರಾತಿ ಸೇರಿ ವಿವಿಧ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net