

ಚಳ್ಳಕೆರೆ: ವಿದ್ಯಾರ್ಥಿಗಳಿಗೆ ಶಿಕ್ಷಣ ಜತೆ ಸಾಮಾಜಿಕ ಕಾಳಜಿ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ನಗರದ ಎಸ್‌ಆರ್‌ಎಸ್ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ಇಂಧನ ಉಳಿಸಿ ಆರೋಗ್ಯ ವೃದ್ಧಿಸಿ ಘೋಷ ವಾಕ್ಯದೊಂದಿಗೆ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ವಾಹನ ದಟ್ಟಣೆಯಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಆರೋಗ್ಯವಂತ ವಾತಾವರಣ ಇರಬೇಕು. ಜನರ ಜಾಗೃತಿಗಾಗಿ ಸೈಕಲ್ ಜಾಥಾ ಮೂಲಕ ಆರೋಗ್ಯ ಜಾಗೃತಿ ಮೂಡಿಸುತ್ತಿರುವುದು ಉತ್ತಮ ಕಾರ್ಯ ಎಂದು ಹೇಳಿದರು.
ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಆಡಳಿತಾಧಿಕಾರಿ ಆತ್ಮಾನಂದ, ಪ್ರಾಚಾರ್ಯ ಬಿ.ಎಸ್.ವಿಜಯ್, ಸತ್ಯನಾರಾಯಣ, ಜಿಪಂ ಮಾಜಿ ಅಧ್ಯಕ್ಷ ಟಿ.ರವಿಕುಮಾರ್, ತಾಪಂ ಸದಸ್ಯ ಜಿ.ವೀರೇಶ್, ನಗರಸಭೆ ಸದಸ್ಯರಾದ ವೈ.ಪ್ರಕಾಶ್, ಚಳ್ಳಕೆರಪ್ಪ, ಬಿ.ಟಿ.ರಮೇಶಗೌಡ, ಮುಖಂಡರಾದ ಆರ್.ಪ್ರಸನ್ನಕುಮಾರ್, ಕೃಷ್ಣಮೂರ್ತಿ, ಸೈಯ್ಯದ್, ಬೋರಣ್ಣ ಮತ್ತಿತರರು ಇದ್ದರು.