

ಚಳ್ಳಕೆರೆ: ಗಿಡ ನೆಟ್ಟು ಬೆಳೆಸುವ ಮೂಲಕ ಹಸಿರೀಕರಣಕ್ಕೆ ಜನತೆ ಒತ್ತು ನೀಡಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ನಗರದ ಸಾರಿಗೆ ಬಸ್ ನಿಲ್ದಾಣ ಆವರಣದಲ್ಲಿ ಶುಕ್ರವಾರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿಸ್ತಾರವಾಗಿ ಬೆಳೆಯುತ್ತಿರುವ ನಗರದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪರಿಸರ ಅಗತ್ಯವಿದೆ ಎಂದರು.
ತಾಲೂಕಿನ ವ್ಯಾಪ್ತಿಯಲ್ಲಿರುವ ಅರಣ್ಯ ಭೂಮಿಯನ್ನು ಪೋಷಣೆ ಮಾಡಿಕೊಂಡು ಇನ್ನಷ್ಟು ಗಿಡಗಳನ್ನು ಬೆಳೆಸಲು ಅರಣ್ಯ ಇಲಾಖೆ ಜಾಗೃತಿ ವಹಿಸಬೇಕು ಎಂದು ಹೇಳಿದರು.
ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ, ಸಾಮಾಜಿಕ ಸಮಿತಿ ಅಧ್ಯಕ್ಷ ಎಚ್.ಆಂಜನೇಯ, ಜಿ.ವೀರೇಶ್, ನಗರಸಭೆ ಸದಸ್ಯರಾದ ಕೆ.ವೀರಭದ್ರಯ್ಯ, ಆರ್.ಮಂಜುಳಾ, ಚಳ್ಳಕೆರಪ್ಪ, ಬಿ.ಟಿ.ರಮೇಶ್‌ಗೌಡ, ಮುಖಂಡರಾದ ಎಚ್.ಎಸ್.ಸೈಯದ್, ಟಿ.ರವಿಕುಮಾರ್ ಇದ್ದರು.