ಆರ್‌ಟಿಇ ಅನುದಾನ ಬಿಡುಗಡೆಗೆ ಆಗ್ರಹ

CLK EDUCATION 11
Published on

ಚಳ್ಳಕೆರೆ: ಆರ್‌ಟಿಇ ಅಡಿ ದಾಖಲು ಮಾಡಿಕೊಂಡಿರುವ ವಿದ್ಯಾರ್ಥಿಗಳ ಶಾಲಾ ಶುಲ್ಕದ ಅನುದಾನವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ತಾಲೂಕು ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಪದಾಧಿಕಾರಿಗಳು ಸೋಮವಾರ ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು.

ಅನುದಾನ ರಹಿತ ಶಾಲೆಗಳಲ್ಲಿ 2019-20ನೇ ಶೈಕ್ಷಣಿಕ ವರ್ಷದಲ್ಲಿ 4 ಸಾವಿರ ವಿದ್ಯಾರ್ಥಿಗಳನ್ನು ಆರ್‌ಟಿಇ ಅಡಿ ದಾಖಲು ಮಾಡಿಕೊಳ್ಳಲಾಗಿದೆ. ಶೈಕ್ಷಣಿಕ ವರ್ಷ ಮುಗಿದರೂ ಅನುದಾನ ಬಿಡುಗಡೆಯಾಗಿಲ್ಲ. ಇದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗಿದೆ. ಶಿಕ್ಷಕರಿಗೆ ವೇತನ ಕೊಡಲು ಸಾಧ್ಯವಾಗುತ್ತಿಲ್ಲ. ಕೂಡಲೇ ಶಾಲೆಗಳ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಆರ್‌ಟಿಇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಒಕ್ಕೂಟದ ಪದಾಧಿಕಾರಿಗಳಾದ ಪಿ.ದಯಾನಂದ, ರಾಜೇಶ್‌ಗುಪ್ತ, ಎಚ್.ಗಂಗಣ್ಣ, ಜಗನ್ನಾಥ, ಚಿಕ್ಕಣ್ಣ, ಡಾ.ಕೆ.ಎಂ.ಜಯಕುಮಾರ್, ಶ್ರೀಧರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net