ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ ಪರಿಹಾರ ನೀಡಿ

CLK MANAVI 24
Published on

ಚಳ್ಳಕೆರೆ: ಸಾಮಾಜಿಕ ದೌರ್ಜನ್ಯಗಳಿಗೆ ಒಳಗಾದ ಜಿಲ್ಲೆಯ ಪರಿಶಿಷ್ಟ ಜಾತಿಯ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಟಿ.ಡಿ.ರಾಜಗಿರಿ, ಶುಕ್ರವಾರ ಸಚಿವ ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿದರು.

ಹಿರಿಯೂರು ತಾಲೂಕಿನ ಶಿವನಗರ, ಕಂಬತ್ತನಹಳ್ಳಿ, ಚಳ್ಳಕೆರೆ ತಾಲೂಕಿನ ದೊಡ್ಡಬೀರನಹಳ್ಳಿ, ಕೋನಿಗರಹಳ್ಳಿ, ಹೊಸದುರ್ಗ ತಾಲೂಕಿನ ಜಂತಿಕೊಳಲು, ದೊಡ್ಡಘಟ್ಟ ಗ್ರಾಮಗಳಲ್ಲಿ ಪರಿಶಿಷ್ಟರ ಮೇಲೆ ದೌರ್ಜನ್ಯ ನಡೆದಿದೆ. ಸಂತ್ರಸ್ತರಿಗೆ ಈತನ ಸರ್ಕಾರದಿಂದ ಯಾವುದೇ ಸೌಲಭ್ಯ ನೀಡಿಲ್ಲ ಎಂದು ತಿಳಿಸಿದರು.

ಕೂಡಲೇ ಎಸ್ಸಿ-ಎಸ್ಟಿ ದೌರ್ಜನ್ಯ ನಿಷೇಧ ಕಾಯ್ದೆ ಪ್ರಕಾರ ಸೌಲಭ್ಯ ನೀಡಬೇಕು. ಸಂತ್ರಸ್ತರ ಕುಟುಂಬಗಳ ಅವಲಂಬಿತ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿಯುತ ಶಾಲೆಗಳಿಗೆ ಮುಕ್ತ ಅವಕಾಶ ಕಲ್ಪಿಸಬೇಕು. ಜಂತಿಕೊಳಲು ಸಂತ್ರಸ್ತರಿಗೆ ಸಾಗುವಳಿ ಹಕ್ಕುಪತ್ರ ವಿತರಿಸಬೇಕು. ದೊಡ್ಡಘಟ್ಟದ ಗ್ರಾಮಸ್ಥರಿಗೆ ಭೂಮಿ ಹಂಚಿಕೆ ಆಗಬೇಕು. ಸರ್ಕಾರಿ ಗೋಮಾಳದಲ್ಲಿ ಹೊಸ ಕಾಲನಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಸಿ.ಜಿ. ಜಯಕುಮಾರ್, ಗುಡಿಹಳ್ಳಿ ತಿಮ್ಮಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net