

ಚಳ್ಳಕೆರೆ: ತಾಲೂಕಿನಲ್ಲಿ ಕರೊನಾ ಸೋಂಕು ಕಂಡು ಬಂದಲ್ಲಿ ಸಾರ್ವಜನಿಕ ಆಸ್ಪತ್ರೆ ಕೈಗೊಳ್ಳುವ ಕಾರ್ಯ ಚಟುವಟಿಕೆಗಳಿಗೆ ಖಾಸಗಿ ವೈದ್ಯರು ಸಹಕಾರ ನೀಡಬೇಕು ಎಂದು ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ ಸೂಚಿಸಿದರು.
ತಾಲೂಕು ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಖಾಸಗಿ ವೈದ್ಯರ ಸಭೆಯಲ್ಲಿ ಮಾತನಾಡಿ, ಸಾಂಕ್ರಾಮಿಕ ರೋಗ ತಡೆಗೆ ಸರ್ವರ ಸಹಕಾರ ಅಗತ್ಯ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಎನ್.ಪ್ರೇಮಸುಧಾ ಮಾತನಾಡಿ, ನಾಯಕನಹಟ್ಟಿ, ಪರಶುರಾಂಪುರದಲ್ಲೂ ಕೋವಿಡ್ ತಪಾಸಣೆ ಕೇಂದ್ರ ಸ್ಥಾಪನೆಗೆ ಚಿಂತನೆ ಮಾಡಲಾಗಿದೆ ಎಂದು ತಿಳಿಸಿದರು.
ಡಾ.ಓಬಣ್ಣ ಪೂಜಾರ್, ಡಾ.ಲೋಕೇಶ್, ಡಾ.ವೀರೇಶ್, ಡಾ.ಚಂದ್ರಾನಾಯ್ಕ, ಡಾ.ಮಂಜುನಾಥ, ಡಾ.ಕೃಷ್ಣರಾಜು, ಡಾ.ಕೆ.ಎಂ.ವಿಜಯಕುಮಾರ್, ಜಿಲ್ಲಾ ಮತ್ತು ತಾಲೂಕು ಆರೋಗ್ಯ ತಂಡದ ಗಂಗಾಧರ, ಪ್ರಸನ್ನಕುಮಾರ್, ಚಂದ್ರಪ್ಪ, ಎನ್.ಪ್ರೇಮಕುಮಾರ್, ಎಸ್.ಬಿ.ತಿಪ್ಪೇಸ್ವಾಮಿ ಮತ್ತಿತರರು ಇದ್ದರು.