ತಾಲೂಕು ಮಟ್ಟದ ಅಧಿಕಾರಿಗಳ ಸಭೆ

CLK TP SABHE 24
Published on

ಚಳ್ಳಕೆರೆ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಶಾಸಕ ಟಿ.ರಘುಮೂರ್ತಿ ನಡೆಸಿದರು.

ಪ್ರತಿ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಕರೊನಾ ನಿಯಂತ್ರಣಕ್ಕೆ ಕೈಗೊಂಡ ಜಾಗೃತಿ ಕಾರ್ಯಕ್ರಮ ಮತ್ತು ಸ್ವಚ್ಛತೆ ಕುರಿತು ಮಾಹಿತಿ ಪಡೆದರು.

ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದ ರೀತಿ ಶುದ್ಧ ನೀರಿನ ಘಟಕಗಳನ್ನು ಸರಿಪಡಿಸಬೇಕು. ಲಾಕ್‌ಡೌನ್ ಕಾರಣದಿಂದ ಬೆಳೆ ನಷ್ಟ ಮಾಡಿಕೊಂಡಿರುವ ರೈತರ ಮಾಹಿತಿಯೊಂದಿಗೆ ಬೆಳೆಯ ನಷ್ಟದ ಪ್ರಮಾಣ ಜಿಪಿಎಸ್ ಫೋಟೋ ಸಹಿತ ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ, ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ, ಇಒ ಶ್ರೀಧರ್ ಬಾರಿಕರ್, ಬಿಇಒ ಸಿ.ಎಸ್.ವೆಂಕಟೇಶ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net