ನಾಳೆ ಭಗೀರಥ ಜಯಂತ್ಯುತ್ಸವ

CLK SABHE 08
Published on

ಚಳ್ಳಕೆರೆ: ಹೊಸದುರ್ಗ ತಾಲೂಕು ಭಗೀರಥ ಪೀಠದಲ್ಲಿ ಫೆ.9ರಂದು ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮಿಗಳ 21ನೇ ವರ್ಷದ ಪಟ್ಟಾಭಿಷೇಕ, 10ರಂದು ಭಗೀರಥ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ನಿವೃತ್ತ ಡಿವೈಎಸ್‌ಪಿ ನಾಗರಾಜ್ ತಿಳಿಸಿದರು.

ನಗರದಲ್ಲಿ ಜಿಲ್ಲಾ ಉಪ್ಪಾರ ಸಂಘದಿಂದ ಆಯೋಜಿಸಿದ್ದ ಭಗೀರಥ ಜಯಂತ್ಯುತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಸಾಮೂಹಿಕ ವಿವಾಹ, ಜನಪದ ಮತ್ತು ಕಲಾಮೇಳ ಕಾರ್ಯಕ್ರಮಗಳು ಜರುಗಲಿವೆ ಎಂದರು.

ವಿವಿಧ ಮಠಾಧೀಶರು, ಸಚಿವರು, ಸಂಸದರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ. ಸಮುದಾಯದ ಸಾಮಾಜಿಕ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶವಿದೆ. ಹೀಗಾಗಿ ಪ್ರತಿ ಗ್ರಾಮದಿಂದಲೂ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಆರ್.ಮೂರ್ತಿ ಮಾತನಾಡಿ, ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸಲು ಸರ್ಕಾರದ ಮೇಲೆ ಒತ್ತಾಯ ತರಬೇಕಿದೆ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಮಾರುತಿ, ಮುಖಂಡರಾದ ಯಲ್ಲಪ್ಪ, ಎಲ್‌ಐಸಿ ರಂಗಸ್ವಾಮಿ, ಜಿ.ಎಚ್.ಹನುಮಂತಪ್ಪ, ಪರಮೇಶ್ವರಪ್ಪ, ಗೋಪನಹಳ್ಳಿ ಶಿವಣ್ಣ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net