26ರಂದು ಬೆಂಗಳೂರು ಚಲೋ

Published on

ಅರಸೀಕೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ.26ರಂದು ರಾಜಭವನ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಹೇಳಿದರು.

ಕೊಬ್ಬರಿ ಬೆಂಬಲ ಬೆಲೆ, ಭೂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ವಿಳಂಬ ಸೇರಿ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಹಲವು ದಿನಗಳಿಂದ ಕಳೆದರೂ ನಮ್ಮ ಮನವಿಗೆ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ. ಅರಸೀಕೆರೆ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುವಂತೆ ಈಗಾಗಲೇ ಹಲವು ಬಾರಿ ಹಕ್ಕೊತ್ತಾಯ ಮಂಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣವೇ ನಮ್ಮ ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸಂಘಟನೆಯ ಪದಾಧಿಕಾರಿಗಳ ಜತೆಗೂಡಿ ಬೆಂಗಳೂರಿಗೆ ತೆರಳಿ ರಾಜ್ಯಪಾಲ ತಾವರ್‌ಚಂದ್ ಗೆಹಲೋತ್ ಅವರಿಗೆ ಅಂದು ಮನವಿ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಖಂಡರಾದ ಅಯೂಬ್ ಪಾಷ, ನಂಜಮ್ಮ, ಏಜಾಜ್ ಪಾಷ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net