ಸುಪ್ತ ಪ್ರತಿಭೆ ಅನಾವರಣಕ್ಕೆ ಕಾರಂಜಿ ಸಹಕಾರಿ

04rajesh1
Published on

ಚಾಮರಾಜನಗರ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಭೋಗಾಪುರ ಗ್ರಾ.ಪಂ. ಸದಸ್ಯ ಕೆಲ್ಲಂಬಳ್ಳಿ ಸೋಮಶೇಖರ್ ತಿಳಿಸಿದರು.

ತಾಲೂಕಿನ ಕೆಲ್ಲಂಬಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಮಂಗಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿದೆ. ಪಾಲಕರು ತಮ್ಮ ಮಕ್ಕಳು ಖಾಸಗಿ ಶಾಲೆಯಲ್ಲಿ ಓದಿದರೆ ಮಾತ್ರ ಬುದ್ದಿವಂತರಾಗುತ್ತಾರೆ ಎಂಬ ಭ್ರಮೆಯಲ್ಲಿದ್ದಾರೆ. ಕೆಲ್ಲಂಬಳ್ಳಿ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ತೆಗೆ ಪಠ್ಯೇತರ ಚಟುವಟಿಕೆಗಳಿಗೂ ಸಹ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

ಮುಖ್ಯ ಶಿಕ್ಷಕ ಕುಮಾರ್ ಮಾತನಾಡಿ, ಕೆಲ್ಲಂಬಳ್ಳಿ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜನೆ ಮಾಡಲು ಗ್ರಾಮಸ್ಥರ ಸಹಕಾರ ಉತ್ತಮವಾಗಿತ್ತು. ಸ್ವಯಂ ಪ್ರೇರಣೆಯಿಂದ ಶಾಲೆಗೆ ಅಗಮಿಸಿ ತಮಗೆ ವಹಿಸಿದ ಜವಾಬ್ದಾರಿಯನ್ನು ನಿರ್ವಹಣೆ ಮಾಡುವ ಮೂಲಕ ಯಶಸ್ವಿಗೆ ಕಾರಣಕರ್ತರಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಬಿಆರ್‌ಸಿ ರಾಜೀವ್, ಕೆಲ್ಲಂಬಳ್ಳಿ ಚರ್ಚ್‌ನ ಫಾದರ್ ರೇವೆಂಟ್ ಸುಜೇಂದ್ರ, ಭೋಗಾಪುರ ಗ್ರಾ.ಪಂ ಅಧ್ಯಕ್ಷೆ ರೂಪ, ಎಸ್‌ಡಿಎಂಸಿ ಅಧ್ಯಕ್ಷ ದೊರೆಸ್ವಾಮಿ, ಉಪಾಧ್ಯಕ್ಷೆ ಸವಿತಾ, ಗ್ರಾಪಂ. ಪಿಡಿಓ ಮಾನಸ, ಗ್ರಾಪಂ. ಸದಸ್ಯರಾದ ರಾಜೇಶ್, ಮಂಗಳಮ್ಮ, ಪುಟ್ಟಗೌರಮ್ಮ, ನಂಜುಂಡಸ್ವಾಮಿ, ಮಹೇಶ್, ರಾಜಮ್ಮ, ಮಹದೇವಪ್ಪ, ನಂಜುಂಡೇಗೌಡ, ಸವಿತಾ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಬಿ.ಮಹದೇವಮೂರ್ತಿ, ನಾಗೇಶ್ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net