ಚಾಮರಾಜನಗರ: ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಭಯೋತ್ಪಾದನಾ ವಿರೋಧಿ ದಿನ ಆಚರಿಸಲಾಯಿತು. ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ತಹಸೀಲ್ದಾರ್ ಕೀರ್ತನಾ, ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಹಾಜರಿದ್ದರು.