ಶ್ರೀ ವಾಸವಿ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ

jeevithas
Published on

ಕೊಳ್ಳೇಗಾಲ: ಪಟ್ಟಣದ ಶ್ರೀ ವಾಸವಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ವರ್ಷದ ಬಿಕಾಂ ಪದವಿಯ 5ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸಂಸ್ಥೆ ವತಿಯಿಂದ ಬುಧವಾರ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ 59 ವಿದ್ಯಾರ್ಥಿಗಳಿಗೆ ಅಭಿನಂದಿಸಿದ ಬಳಿಕ ಶ್ರೀ ವಾಸವಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎ.ಡಿ. ಕುಮಾರಕೃಷ್ಣ ಮಾತನಾಡಿ, ಪದವಿಗಳನ್ನು ನಾಮ್ ಕೇ ವಾಸ್ತೆಗೆ ಮಾತ್ರ ಪಡೆದುಕೊಳ್ಳಬಾರದು. ಮಕ್ಕಳು ಪ್ರಪಂಚ ಜ್ಞಾನವನ್ನು ಅರಿತುಕೊಳ್ಳಬೇಕು. ಹಾಗೇ ಕ್ಷಣ ಕ್ಷಣದ ವಿದ್ಯಾಮಾನಗಳ ಬಗ್ಗೆ ಅರಿವು ಪಡೆಯಬೇಕು. ಇರುವ ಸಮಯವನ್ನು ಸದ್ಬಳಕೆ ಮಾಡಿಕೊಂಡು ಯಾವುದಾದರೂ ಒಂದು ಕ್ಷೇತ್ರದಲ್ಲಿ ಪರಿಣಿತಿ ಪಡೆದು ಉನ್ನತ ಸ್ಥಾನಮಾನಗಳನ್ನು ಪಡೆದು ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಶ್ರೀ ವಾಸವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಡಾ.ಪಿ.ಜಿ. ಶ್ರೀಧರ್, ಸಹ ಕಾರ್ಯದರ್ಶಿ ನಾಗರಾಜು ಬಾಬು, ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಜೆ.ರವಿಕುಮಾರ್, ಶ್ರೀ ವಾಸವಿ ಸಂಯುಕ್ತ ಕಾಲೇಜಿನ ಪ್ರಾಂಶುಪಾಲೆ ವಾಸವಾಂಬ, ಪ್ರಾಂಶುಪಾಲ ದಯಾಪ್ರಸಾದ್, ಶಾಲಾ ಮುಖ್ಯಶಿಕ್ಷಕಿ ಗೀತಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net