ಕಾಡಾನೆಗಳ ದಾಳಿಗೆ ಬೆಳೆ ನಾಶ

IMG-20240526-WA0078
Published on

ಗುಂಡ್ಲುಪೇಟೆ: ತಾಲೂಕಿನ ಆಲತ್ತೂರು ಗ್ರಾಮದ ಜಮೀನುಗಳಿಗೆ ಕಾಡಾನೆಗಳು ದಾಳಿ ನಡೆಸಿ ಬೆಳೆ ಹಾಗೂ ತೆಂಗಿನ ಮರಗಳನ್ನು ನಾಶಮಾಡಿವೆ.

ಕಳೆದ ಹತ್ತು ದಿನಗಳಿಂದ ಕಾಡಾನೆಗಳ ದಾಳಿಗೆ ಕಾಡಂಚಿನ ರೈತರ ಬೆಳೆಗಳು ನಾಶವಾಗುತ್ತಿವೆ. ಶನಿವಾರ ರಾತ್ರಿ ಬಂಡೀಪುರ ಹುಲಿ ಯೋಜನೆಯ ಓಂಕಾರ್ ವಲಯದಿಂದ ಹೊರಬಂದ ಕಾಡಾನೆಗಳು ಗ್ರಾಮದ ಚಿಕ್ಕಮಾದೇಗೌಡ, ದೊಡ್ದ ಮಾದೇಗೌಡ ಹಾಗೂ ರತ್ನಮ್ಮ ಎಂಬುವರ ಜಮೀನುಗಳ ಸೋಲಾರ್ ಬೇಲಿಯನ್ನು ಮುರಿದು ಹಾಕಿ ಬಾಳೆ, ತೆಂಗು ಹಾಗೂ ಕೃಷಿ ಪರಿಕರಗಳನ್ನು ನಾಶಪಡಿಸಿವೆ.

ಈ ಬಗ್ಗೆ ಹಲವಾರು ಬಾರಿ ಅರಣ್ಯ ಇಲಾಖೆಗೆ ದೂರು ನೀಡಿದರೂ ಯಾವುದೇ ಉಪಯೋಗ ಆಗಿಲ್ಲ. ಆದ್ದರಿಂದ ಇನ್ನಾದರೂ ಆನೆಗಳನ್ನು ಕಾಡಿಗಟ್ಟಲು ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net