ತಂತ್ರಜ್ಞಾನ ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಿರಿ

28-GPT-2
Published on

ಗುಂಡ್ಲುಪೇಟೆ: ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಉನ್ನತ ಶಿಕ್ಷಣ ದೊರಕಿಸುವಲ್ಲಿ ಸರ್ಕಾರಿ ಕಾಲೇಜುಗಳು ಪ್ರಮುಖ ಪಾತ್ರವಹಿಸಿವೆ ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ 2023-24ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಈಗಿನ ಜಾಗತಿಕ ಮಟ್ಟದ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಕಾಣಲು ವಿದ್ಯಾರ್ಥಿಗಳಿಗೆ ಶಿಕ್ಷಣ ಅತ್ಯವಶ್ಯಕವಾಗಿದೆ. ತಂತ್ರಜ್ಞಾನದ ಮತ್ತು ಸಮಯದ ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು ಎಂದು ಹೇಳಿದರು.

ಪ್ರಾಂಶುಪಾಲ ಡಾ.ಎ.ಆರ್.ಮದನಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಸಾಂಸ್ಕೃತಿಕ, ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ತಿಳಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಕೆ.ಚಾಮರಾಜು, ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ರಮೇಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕ ಟಿ.ಆರ್.ಗಿರೀಶ್ ಸೇರಿದಂತೆ ಕಾಲೇಜಿನ ಎಲ್ಲ ಅಧ್ಯಾಪಕರು, ಅಧ್ಯಾಪಕೇತರರು ಹಾಗೂ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net