ಹುಲಿ ಸೆರೆಗೆೆ ಅರಣ್ಯ ಇಲಾಖೆಯಿಂದ ಕೂಂಬಿಂಗ್

01-GPT-5
Published on

ಗುಂಡ್ಲುಪೇಟೆ: ತಾಲೂಕಿನ ಪಡಗೂರು ಗ್ರಾಮದಲ್ಲಿ ಸುಳಿದಾಡುತ್ತಿರುವ ಹುಲಿ ಪತ್ತೆಗೆೆ ಅರಣ್ಯ ಇಲಾಖೆ ಶನಿವಾರ ಕೂಂಬಿಂಗ್ ನಡೆಸಿತು. ಮೂರು ದಿನಗಳ ಹಿಂದೆ ಗ್ರಾಮದ ಜಮೀನಿನಲ್ಲಿ ರೈತರ ಕಣ್ಣೆದುರೇ ಜಿಂಕೆ ಮೇಲೆರಗಿದ್ದ ಬಳಿಕ ಹುಲಿ ಸುತ್ತಮುತ್ತಲೇ ಸುಳಿದಾಡುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಅಕ್ಕಪಕ್ಕದ ಜಮೀನುಗಳಲ್ಲಿ ಹುಲಿ ಹೆಜ್ಜೆ ಸ್ಪಷ್ಟವಾಗಿ ಮೂಡಿರುವುದರಿಂದ ರೈತರು ಹಾಗೂ ಕಾರ್ಮಿಕರು ಜಮೀನಿಗೆ ಹೋಗಲು ಭಯಪಡುತ್ತಿದ್ದಾರೆ. ಹುಲಿಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಯ ಮೇಲೆ ಒತ್ತಡ ಹೇರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಬಫರ್ ವಲಯದ ಅರಣ್ಯ ಸಿಬ್ಬಂದಿ ಹಾಗೂ ಎಸ್‌ಟಿಪಿಎಫ್ ಸಿಬ್ಬಂದಿ ಹುಲಿ ಹೆಜ್ಜೆ ಜಾಡು ಹಿಡಿದು ಕೂಂಬಿಂಗ್ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಹುಲಿಯ ಚಲನವಲನ ಪತ್ತೆಗೆ ಕ್ಯಾಮರಾ ಅಳವಡಿಸುವುದರ ಜತೆಗೆ ಬೋನು ಇರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net