ಮಕ್ಕಳ ಕಲ್ಯಾಣ ಕ್ಷೇತ್ರ ಅರ್ಜಿ ಆಹ್ವಾನ

application
Published on

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2024 ನೇ ಸಾಲಿನಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 25 ಸಾವಿರ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ಒಂದು ಲಕ್ಷ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುತ್ತದೆ.

ಆಸಕ್ತರು ನಿಗದಿಪಡಿಸಿರುವ ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 129ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ದ್ವಿಪ್ರತಿಯಲ್ಲಿ ಭರ್ತಿ ಮಾಡಿ ಸೆಪ್ಟೆಂಬರ್ 20ರೊಳಗೆ ಸಲ್ಲಿಸಬೇಕು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net