ಚಾಮರಾಜನಗರ: ಲೋಕಾಯುಕ್ತ ಅಧಿಕಾರಿಗಳು ಸೆ.18ರಂದು ಚಾಮರಾಜನಗರಕ್ಕೆ ಭೇಟಿ ನೀಡಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಪ್ರವಾಸಿಮಂದಿರದಲ್ಲಿ ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳ ಅನಗತ್ಯ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ನಮೂನೆ-1 ಮತ್ತು 2ರಲ್ಲಿ ಭರ್ತಿ ಮಾಡಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಕೆ.ಟಿ. ಮ್ಯಾಥ್ಯೂಸ್ ಥಾಮಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.