ಸೆ.20 ರಂದು ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

Published on

ಚಾಮರಾಜನಗರ: ಜಿಲ್ಲಾ ತೋಟದ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಸೆ.20 ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.

ನಗರದ ಸಂತೇಮರಹಳ್ಳಿ ರೇಷ್ಮೆ ಗೂಡು ಮಾರುಕಟ್ಟೆಯ ಕಟ್ಟಡದಲ್ಲಿರುವ ಜಿಲ್ಲಾ ಹಾಪ್‌ಕಾಮ್ಸ್ ಕಚೇರಿ ಅವರಣದಲ್ಲಿ ನಡೆಯುವ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಆರ್. ಲೋಕೇಶ್ ವಹಿಸುವರು. ಸಂಘದ ಸರ್ವ ಸದಸ್ಯರು ಸಭೆಗೆ ಆಗಮಿಸಿಸಬೇಕೆಂದು ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್. ರಾಜು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net