ಎಫ್‌ಡಿಎ ಎಸಿಬಿ ಬಲೆಗೆ

mahesh (acb)
Published on


ಚಾಮರಾಜನಗರ: ಪ್ರಾಥಮಿಕ ಆರೋಗ್ಯ ಕೇಂದ್ರದ ಹೊರಗುತ್ತಿಗೆ ನೌಕರನಿಗೆ ವರ್ಕ್ ಆರ್ಡರ್ ಮತ್ತು ಸ್ಯಾಲರಿ ಕ್ರೆಡಿಟ್ ಬಿಲ್ ನೀಡಲು ಲಂಚ ಪಡೆಯುತ್ತಿದ್ದ ಆರೋಗ್ಯ ಇಲಾಖೆ ಎಫ್‌ಡಿಎ ಮಂಗಳವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಎಫ್‌ಡಿಎ ಮಹೇಶ್ ಎಸಿಬಿ ಪೊಲೀಸರಿಗೆ ಸಿಕ್ಕಿಬಿದ್ದವರು. ದೂರುದಾರನಿಂದ 3 ಸಾವಿರ ರೂ. ಲಂಚ ಪಡೆಯುವಾಗ ಮಹೇಶ್ ಎಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net