ಹಾಪ್‌ಕಾಮ್ಸ್‌ನಲ್ಲಿ ಆಕಸ್ಮಿಕ ಬೆಂಕಿ

24MAHESH1
Published on

ಚಾಮರಾಜನಗರ: ನಗರದ ಜಿಲ್ಲಾ ಆಸ್ಪತ್ರೆಯ ಮುಂಭಾಗದ ಹಾಪ್‌ಕಾಮ್ಸ್ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮಳಿಗೆ ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಶುಕ್ರವಾರ ಮಧ್ಯರಾತ್ರಿ ಹೆಚ್ಚಿನ ವಿದ್ಯುತ್ ಪ್ರವಹಿಸಿ, ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಳಿಗೆಯಲ್ಲಿದ್ದ ಫ್ರಿಡ್ಜ್, ಮಿಕ್ಸಿ, ಹಣ್ಣುಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ಜಿಲ್ಲಾ ಹಾಪ್‌ಕಾಮ್ಸ್‌ನಿಂದ ಜಿಲ್ಲಾಸ್ಪತ್ರೆಯ ಮುಂಭಾಗ ಮಳಿಗೆಯನ್ನು ನಿರ್ಮಿಸಿ, ಹಣ್ಣು ಹಾಗೂ ತರಕಾರಿ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಚಿಕ್ಕರಾಜು ಎಂಬುವವರು ಮಳಿಗೆ ಬಾಡಿಗೆ ಪಡೆದು ವ್ಯಾಪಾರ ಮಾಡುತ್ತಿದ್ದರು. ಅನಾಹುತ ಸಂಭವಿಸಿರುವ ವಿಷಯ ತಿಳಿದು ಸ್ಥಳಕ್ಕೆ ಹಾಪ್‌ಕಾಮ್ಸ್ ಅಧ್ಯಕ್ಷ ಶಾಂತಮಲ್ಲಪ್ಪ , ಉಪಾಧ್ಯಕ್ಷ ಸಿದ್ದಶೆಟ್ಟಿ, ಕಾರ್ಯದರ್ಶಿ ಯತೀಶ್ ಭೇಟಿ ನೀಡಿ ಪರಿಶೀಲಿಸಿದರು. ಈ ಬಗ್ಗೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net