ಸರ್ಕಾರಿ ನೌಕರರ ಸಂಘದಿಂದ ಡಿಸಿಗೆ ಮನವಿ ಸಲ್ಲಿಕೆ

19raju5
Published on

ಚಾಮರಾಜನಗರ: ರಾಜ್ಯ ಸರ್ಕಾರಿ ನೌಕರರ ಸಂಘದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಂಘದ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್‌ಗೆ ಮನವಿ ಸಲ್ಲಿಸಲಾಯಿತು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಿಸಿ ಕಚೇರಿಯಲ್ಲಿ ಸಂಘದ ಪದಾಧಿಕಾರಿಗಳು ಬುಧವಾರ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘವು 1920ರಲ್ಲಿ ಸ್ಥಾಪನೆಯಾಗಿದ್ದು, ಸಂಘ ಸಂಸ್ಥೆಗಳ ನೋಂದಣಿ ಕಾಯ್ದೆ ಅನ್ವಯ ನೋಂದಣಿಯಾಗಿ ಸರ್ಕಾರ ಮಾನ್ಯತೆಯನ್ನು ಹೊಂದಿ ಸುಮಾರು 5.25 ಲಕ್ಷ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ರಾಷ್ಟದಲ್ಲಿಯೇ ಮಾದರಿ ಸಂಘಟನೆಯಾಗಿದೆ ಎಂದರು.
ಇದನ್ನು ವಿರೋಧಿಸುವ ಕೆಲವರು ಜಿಲ್ಲಾ, ತಾಲ್ಲೂಕು ಘಟಕಗಳ ಅಧ್ಯಕ್ಷರುಗಳ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಂಘಟನೆಯ ಘನತೆಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ಮಹದೇವಸ್ವಾಮಿ, ಖಜಾಂಚಿ ಮಹದೇವಯ್ಯ, ಶಿವಮೂರ್ತಿ, ನೇತ್ರಾವತಿ, ವಸಂತ, ಪ್ರಮೀಳಾ, ಪಾರ್ವತಿ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net