

ಚಾಮರಾಜನಗರ: ಪೌರಕಾರ್ಮಿಕರು ಜ್ಞಾನಾರ್ಜನೆ ಹೆಚ್ಚು ಒತ್ತು ನಿಡಬೇಕು ಎಂದು ನಗರಸಭಾ ಅಧ್ಯಕ್ಷ ಆಶಾನಟರಾಜು ಸಲಹೆ ನೀಡಿದರು.
ನಗರದ 9ನೇ ವಾರ್ಡ್ ಪೌರಕಾರ್ಮಿಕರ ಕಾಲೋನಿಯಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ವತಿಯಿಂದ ನಡೆದ ಚಾಮರಾಜನಗರ ಘಟಕದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪ್ರತಿ ವಿತರಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ನೀಡಿರುವ ಜವಾಬ್ದಾರಿಯನ್ನು ಅಚ್ಚುಗಟ್ಟಾಗಿ ನಿರ್ವಹಿಸುವ ಮೂಲಕ ಸಂಘ, ಸಮುದಾಯದ ಅಭಿವೃದ್ದಿಗೆ ಶ್ರಮಿಸಬೇಕು ಎಂದರು.
ಪೌರಕಾರ್ಮಿಕರು ತಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡುವ ಮೂಲಕ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಎಲ್ಲ ರಂಗಗಳಲ್ಲೂ ಮೇಲೆ ಬರಬೇಕು. ಜತೆಗೆ ಪೌಕಕಾರ್ಮಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು ಎಂದರು. ಚಾಮರಾಜನಗರ ನಗರ ಘಟಕ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು, ಪ್ರಧಾನ ಕಾರ್ಯದರ್ಶಿ ದಿನೇಶ್‌ಕುಮಾರ್, ಉಪಾಧ್ಯಕ್ಷ ಜಿ.ಎನ್.ಚಾಮ, ಜಿಲ್ಲಾಧ್ಯಕ್ಷ ಹೊನ್ನೂರು ರ‍್ಮುಗಂ, ಪ್ರಧಾನ ಕಾರ್ಯದರ್ಶಿ ವೈ.ಕೆ.ಮೋಳೆ ಪಳನಿ, ಉಪಾಧ್ಯಕ್ಷ ಕುಮಾರ್, ಎಸ್.ಎಂ. ಪಳನಿಸ್ವಾಮಿ, ಎಂ.ಕೆ.ಮಹದೇವ, ಮಂಜುಜಯಸಿAಹ ಇತರರು ಹಾಜರಿದ್ದರು.