ಕೊಳ್ಳೇಗಾಲ : ತಾಲೂಕಿನ ತಿಮ್ಮರಾಜಿಪುರ ಗ್ರಾಮದಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ದೊರೆತಿದೆ.
ಪರೀಕ್ಷೆ ಬರೆದಿದ್ದ 50 ವಿದ್ಯಾರ್ಥಿಗಳ ಪೈಕಿ 50 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇವರಲ್ಲಿ ವಿದ್ಯಾರ್ಥಿನಿ ಎಲ್.ಮೋನಿಕಾ 612 ಅಂಕಗಳನ್ನು ಪಡೆದಿದ್ದಾರೆ.