18 ವಿದ್ಯಾರ್ಥಿಗಳು ಗೈರು

ಯಳಂದೂರು ತಾಲೂಕಿನ ಮೆಳ್ಳಹಳ್ಳಿ ಗ್ರಾಮದ ಸರ್ಕಾರಿ ಆದರ್ಶ ಶಾಲೆಯಲ್ಲಿ ಬುಧವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಎ.ಆರ್.ಕೃಷ್ಣಮೂರ್ತಿ ಅಭಿಮಾನಿ ಬಳಗದಿಂದ ಗುಲಾಬಿ ಹೂವು, ಪೆನ್ನು ನೀಡಿ ಶುಭ ಕೋರಲಾಯಿತು. ಕಂದಹಳ್ಳಿ ನಂಜುಂಡಸ್ವಾಮಿ, ಪ್ರಭುಶಂಕರ್ ಸೇರಿದಂತೆ ಅನೇಕರು ಇದ್ದರು.

Published on
ಯಳಂದೂರು: ಬುಧವಾರದಿಂದ ಆರಂಭಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾಲೂಕಿನಾದ್ಯಂತ ಸುಸೂತ್ರವಾಗಿ ನಡೆಯಿತು.
ತಾಲೂಕಿನಲ್ಲಿ ಒಟ್ಟು 869 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 18 ಮಂದಿ ಮಾತ್ರ ಪರೀಕ್ಷೆಗೆ ಗೈರಾಗಿದ್ದು, 851 ಮಂದಿ ಪರೀಕ್ಷೆ ಬರೆದರು. ಯಳಂದೂರು ಪಟ್ಟಣದ ಸರ್ಕಾರಿ ಪಬ್ಲಿಕ್ ಶಾಲೆ, ಜೆಎಸ್‌ಎಸ್ ಮಹಿಳಾ ಪ್ರೌಢಶಾಲೆ ಮದ್ದೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಮೆಳ್ಳಹಳ್ಳಿ ಗ್ರಾಮದ ಸರ್ಕಾರಿ ಆದರ್ಶ ಶಾಲೆಗಳಲ್ಲಿ ಪರೀಕ್ಷಾ ಕೇಂದ್ರವನ್ನು ತೆರೆಯಲಾಗಿತ್ತು.
ಶುಭ ಕೋರಿದ ಎಆರ್‌ಕೆ ಅಭಿಮಾನಿಗಳು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೊದಲ ದಿನವಾದ ಬುಧವಾರ ತಾಲೂಕಿನ ಮೆಳ್ಳಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯದ ಪರೀಕ್ಷಾ ಕೇಂದ್ರದ ಬಳಿ ಶಾಸಕ ಎ.ಆರ್. ಕೃಷ್ಣಮೂರ್ತಿ ಅಭಿಮಾನಿ ಬಳಗದ ಸದಸ್ಯರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ಹಾಗೂ ಪೆನ್ನು ನೀಡುವ ಮೂಲಕ ಶುಭ ಕೋರಿದರು.
ಪರೀಕ್ಷೆ ಆರಂಭಕ್ಕೂ ಮುಂಚೆ ಪರೀಕ್ಷಾ ಕೇಂದ್ರದ ಮುಂಭಾಗ ಇದಕ್ಕೆ ಹಾಜರಾದ ವಿದ್ಯಾರ್ಥಿಗಳಿಗೆ ವಿಶೇಷ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿ ಬಳಗದ ಮುಖಂಡ ಕಂದಹಳ್ಳಿ ನಂಜುಂಡಸ್ವಾಮಿ ಶುಭ ಕೋರಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲೂಕು ಸದಸ್ಯ ದುಗ್ಗಹಟ್ಟಿ ಪ್ರಭುಶಂಕರ್, ಪಿಎಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ಮಲ್ಲು, ಪ್ರದೀಪ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net