ಈ ವೇಳೆ ಗ್ರಾಮಸ್ಥರು ಮಾತನಾಡಿ, ಈ ಭಾಗದ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಗ್ರಾಮದತ್ತ ಆಗಮಿಸಿ ಸಾಕು ಪ್ರಾಣಿಗಳನ್ನು ಬಲಿ ಪಡೆಯುತ್ತಿದೆ. ಇದರಿಂದ ಆತಂಕಕ್ಕೆ ಒಳಗಾಗಿದ್ದೇವೆ. ಆದ್ದರಿಂದ ಚಿರತೆಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದರು. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗುವುದೆಂದು ಸಿಬ್ಬಂದಿ ತಿಳಿಸಿದರು.