30ರಂದು ಕೊಳ್ಳೇಗಾಲಕ್ಕೆ ಸಿಎಂ ಡಿಕೆಶಿ ಆಗಮನ

ಅಧಿಕಾರಿಗಳೊಂದಿಗೆ ಸಿದ್ಧತೆ ಪರಿಶೀಲಿಸಿದ ಶಾಸಕರು
ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಕೊಳ್ಳೇಗಾಲಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಶಾಸಕ ಎ.ಆರ್.ಕೃಷ್ಣ ಮೂರ್ತಿ ಅವರು ಪಟ್ಟಣದ ಎಂಜಿಎಸ್‌ವಿ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಶ್ರೀರೂಪಾ, ಮುತ್ತುರಾಜ್, ದಿನೇಶ್ ಕುಮಾರ್  ಮೀನಾ, ಬಸವರಾಜು, ಮೋಹನ್ ಇತರರಿದ್ದರು.
ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಕೊಳ್ಳೇಗಾಲಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಶಾಸಕ ಎ.ಆರ್.ಕೃಷ್ಣ ಮೂರ್ತಿ ಅವರು ಪಟ್ಟಣದ ಎಂಜಿಎಸ್‌ವಿ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಶ್ರೀರೂಪಾ, ಮುತ್ತುರಾಜ್, ದಿನೇಶ್ ಕುಮಾರ್ ಮೀನಾ, ಬಸವರಾಜು, ಮೋಹನ್ ಇತರರಿದ್ದರು.
Published on

ಕೊಳ್ಳೇಗಾಲ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರೆವೇರಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೆ.30 ರಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಎ.ಆರ್.ಕೃಷ್ಣ ಮೂರ್ತಿ ಅವರು ಅಧಿಕಾರಿಗಳ ಜತೆಗೂಡಿ ಪಟ್ಟಣದ ಎಂಜಿಎಸ್‌ವಿ ಕಾಲೇಜು ಮೈದಾನ ಹಾಗೂ ಮಹದೇಶ್ವರ ಕ್ರೀಡಾಂಗಣಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಸುಮಾರು 20 ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಸೆ.30 ರಂದು ಸಿಎಂ ಡಿ.ಕೆ ಶಿವಕುಮಾರ್ ಅವರು ಕೊಳ್ಳೇಗಾಲಕ್ಕೆ ಆಗಮಿಸುತ್ತಿದ್ದಾರೆ. ಅಂತೆಯೇ, ಎಂಜಿಎಸ್‌ವಿ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಮಹದೇಶ್ವರ ಕ್ರೀಡಾಂಗಣದಲ್ಲಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದ್ದೇನೆ ಎಂದರು.

ಸಂತೇಮರಳ್ಳಿ 5 ಕೋಟಿ ರೂ. ವೆಚ್ಚದಲ್ಲಿ ಎಳನೀರು ಮಾರುಕಟ್ಟೆ, ಮೆಲ್ಲಹಳ್ಳಿ ಗೇಟ್ ಬಳಿ ಅಗ್ನಿ ಶಾಮಕ ಠಾಣೆ, 14.50 ಕೋಟಿ ರೂ. ವೆಚ್ಚದಲ್ಲಿ ಹೊಂಗನೂರು ಹಿರಿಕೆರೆ ಅಭಿವೃದ್ಧಿ ಹಾಗೂ ಮುಖ್ಯ ಕಾಲುವೆಗಳು ಹಾಗು ಉಪ ಕಾಲುವೆಗಳ ಆಧುನೀಕರಣ ಕಾಮಗಾರಿ, ಮುಡಿಗುಂಡ ಸೇತುವೆ ನಿರ್ಮಾಣ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಚಾಲನೆ ಸಿಗಲಿದೆ. ಅಂತೆಯೇ ಮುಡಿಗುಂಡ ಬಳಿಯಿರುವ ಹಿಂದುಳಿದ ವರ್ಗಗಳ ಬಾಲಕರ ನಿಲಯ, 1.13 ಕೋಟಿ ವೆಚ್ಚದ ಕ್ರೀಡಾ ವಸತಿ ನಿಲಯದಲ್ಲಿ ಒಳಾಂಗಣ ಕ್ರೀಡಾಂಗಣ ಮತ್ತು ಮರದ ನೆಲಹಾಸು ಕಾಮಗಾರಿ, 35 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆ ಸಾಮರ್ಥ್ಯದ ಯಳಂದೂರು ನೂತನ ಆಸ್ಪತ್ರೆ ಕಾಮಗಾರಿ ಲೋಕಾರ್ಪಣೆಗೊಳ್ಳಿದೆ ಎಂದರು.

ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಸಿಲ್ದಾರ್ ಬಸವರಾಜು, ಡಿವೈಎಸ್ಪಿ ಮೋಹನ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕಿರಣ್ ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಕುಮಾರ್, ಆಹಾರ ಇಲಾಖೆಯ ಉಪನಿರ್ದೇಶಕ ವಸುಂಧರ ಹೆಗಡೆ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಭಾಸ್ಕರ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net