ಪಟ್ಟಣದ ಪಿಎಂಸಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಬಿಆರ್‌ಸಿ ವೆಂಕಟೇಶ್ ಅವರು ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿ, ಶೈಕ್ಷಣಿಕ ವಲಯದ ಎಲ್ಲ ಪ್ರೌಢಶಾಲೆಯ 8 ಹಾಗೂ 9ನೇ ತರಗತಿಯ ಪರಿಶಿಷ್ಟ ಜಾತಿ, ಪಂಗಡದ 72 ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದಾರೆ. ಚಿತ್ರದುರ್ಗ, ಬಾದಾಮಿ, ಪಟ್ಟದಕಲ್ಲು, ಕೂಡಲ ಸಂಗಮ, ಆಲಮಟ್ಟಿ, ಹಂಪಿ, ತುಂಗಾಭದ್ರಾ ಜಲಾಶಯ ಹಾಗೂ ಇನ್ನಿತರ ಐತಿಹಾಸಿಕ ಪ್ರೇಕ್ಷಣಿಯ ಸ್ಥಳಗಳಿಗೆ ತೆರಳಿದ್ದಾರೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿದಾಗ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳುವುದರ ಮೂಲಕ ಜ್ಞಾನಾರ್ಜನೆಯನ್ನು ಹೆಚ್ಚಿಸಕೊಳ್ಳಬೇಕು. ಪ್ರವಾಸದ ವೇಳೆ ಶಿಕ್ಷಕರು ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ತಿಳಿಸಿದರು.