ಕುಂತೂರು ಮೋಳೆ ಗ್ರಾಮದ ಬಸವರಾಜು(42) ಬಂಧಿತ ವ್ಯಕ್ತಿ. ಈತನಿಂದ 15 ಮೂಟೆಯಲ್ಲಿದ್ದ 755 ಕೆ.ಜಿ ತೂಕದ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಸರ್ಕಾರ ಬಡಜನರಿಗೆ ನೀಡುವ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಶೇಖರಿಸಿಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಆಹಾರ ನಿರೀಕ್ಷಕ ಪ್ರಸಾದ್ ಹಾಗೂ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಎಸ್‌ಐ ಕರಿಬಸಪ್ಪ ಹಾಗೂ ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.