ಸಿಂಡಿಕೇಟ್ ಸದಸ್ಯ ಪುಟ್ಟಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳನ್ನು ಅಂಕಗಳಿಗೆ ಸೀಮಿತಗೊಳಿಸದೆ ಪಠ್ಯೇತರ ಚಟುವಟಿಕೆಗಳಾದ ಎನ್‌ಎಸ್‌ಎಸ್, ಕ್ರೀಡೆ, ಕೌಶಲ್ಯ ತರಬೇತಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಬೇಕು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ, ಸಂಸತ್ ಕಲಾಪಗಳು ಮತ್ತು ತುರ್ತು ಪರಿಸ್ಥಿತಿ ಸಂದರ್ಭಗಳ ಕುರಿತು ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳು ಸಹಾಯಕವಾಗುತ್ತವೆ ಎಂದರು.