ಸಚಿವ ಪುಟ್ಟರಂಗಶೆಟ್ಟಿಗೆ ಅದ್ಧೂರಿ ಸ್ವಾಗತ

ಯಳಂದೂರು ತಾಲೂಕಿನ ಉಪ್ಪಿನಮೋಳೆ ಗ್ರಾಮದ ಸ್ವಗೃಹದಲ್ಲಿ ನೂತನ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಕುಟುಂಬಸ್ಥರು ಆರತಿ ಎತ್ತಿ ಸ್ವಗತಕೋರಿದರು.
ಯಳಂದೂರು ತಾಲೂಕಿನ ಉಪ್ಪಿನಮೋಳೆ ಗ್ರಾಮದ ಸ್ವಗೃಹದಲ್ಲಿ ನೂತನ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಕುಟುಂಬಸ್ಥರು ಆರತಿ ಎತ್ತಿ ಸ್ವಗತಕೋರಿದರು.
Published on

ಯಳಂದೂರು:

ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಯಳಂದೂರು ತಾಲೂಕಿಗೆ ಆಗಮಿಸಿದ ಸಚಿವ ಪುಟ್ಟರಂಗಶೆಟ್ಟಿ ಅವರಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.

ಯರಿಯೂರು ಗ್ರಾಮದ ಭಗೀರಥ ಪುತ್ಥಳಿ ಮುಂಭಾಗ, ಯಳಂದೂರು ಪಟ್ಟಣದ ಜಾಮೀಯಾ ಮಸೀದಿ, ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿ ಸಚಿವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ನಂತರ ಸ್ವಗ್ರಾಮ ಉಪ್ಪಿಮೋಳೆ ಗ್ರಾಮದ ಮನೆಯಲ್ಲಿ ಕುಟುಂಬಸ್ಥರು ಬೆಲ್ಲದ ಆರತಿ ಎತ್ತಿ ಸ್ವಾಗತಿಸಿದರು. ಬಳಿಕ ಸಚಿವರು ಗ್ರಾಮದ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ತಾಲೂಕಿನ ವೈ.ಕೆ.ಮೋಳೆ ಗ್ರಾಮದ ದೊಡ್ಡಮ್ಮ, ಚಿಕ್ಕಮ್ಮತಾಯಿ, ಚಾಮುಂಡೇಶ್ವರಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಚಿವರು, ನಮ್ಮ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ. ಇಡೀ ಜಿಲ್ಲೆಯ ಜನರು ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ಅನುಗುಣವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದರು.
ಜಿಪಂ ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್, ನಗರಸಭೆ ಮಾಜಿ ಸದಸ್ಯ ಮುಡಿಗುಂಡ ಶಾಂತರಾಜು, ಟಿಎಪಿಸಿಎಂಎಸ್ ಮಾಜಿ ಉಪಾಧ್ಯಕ್ಷ ಕುಸುಮರಾಜು, ಪುಟ್ಟರಂಗಶೆಟ್ಟಿ ಅಭಿಮಾನಿ ಬಳಗದ ಅಧ್ಯಕ್ಷ ಯರಿಯೂರು ಕಿರಣ್, ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಜಿಲ್ಲಾಧ್ಯಕ್ಷ ಕೃಷ್ಣಾಪುರ ದೇವರಾಜು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ರಾಜೇಶ್, ಶಾಂತಮಲ್ಲು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net