ಈ ಮಾರ್ಗದಲ್ಲಿ ಕಾಡಾನೆ ಹಾಗೂ ಚಿರತೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿರುವುದರ ಬಗ್ಗೆ ಭಕ್ತರು ತೀವ್ರ ಆಕ್ಷೇಪ ಪಡಿಸಿದ್ದಾರೆ. ಕಳೆದ ತಿಂಗಳ ಹಿಂದೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಭಕ್ತರೊಬ್ಬರೂ ಚಿರತೆ ದಾಳಿಗೆ ಬಲಿಯಾಗಿದ್ದರು. ಮಹಾ ಶಿವರಾತ್ರಿ ಜಾತ್ರೆ ವೇಳೆ ಈ ಮಾರ್ಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಿದ್ದರೂ ಪಾಲಕರೊಂದಿಗೆ ಪಾದಯಾತ್ರೆಯಲ್ಲಿ ತೆರಳುತಿದ್ದ ಬಾಲಕನೊಬ್ಬನ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿತ್ತು. ಇದರಿಂದ ಭಕ್ತರನ್ನು ಬೆಚ್ಚಿ ಬೀಳಿಸಿತ್ತು. ಆದರೆ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯುವಲ್ಲಿ ಹೆಚ್ಚಿನ ನಿಗಾ ವಹಿಸುತ್ತಿಲ್ಲ.