ಮಿಣ್ಯಂಗೆ ತೆರಳುವ ಮಾರ್ಗದಲ್ಲಿ ಕಾಣಿಸಿಕೊಂಡ ಒಂಟಿಸಲಗ

ಹನೂರು ತಾಲೂಕಿನ ಮಿಣ್ಯಂಗೆ ತೆರಳುವ ಮುಖ್ಯ ರಸ್ತೆ ಬದಿಯಲ್ಲಿನ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಒಂಟಿ ಸಲಗ.
ಹನೂರು ತಾಲೂಕಿನ ಮಿಣ್ಯಂಗೆ ತೆರಳುವ ಮುಖ್ಯ ರಸ್ತೆ ಬದಿಯಲ್ಲಿನ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಒಂಟಿ ಸಲಗ.
Published on

ಸಾರ್ವಜನಿಕರಲ್ಲಿ ಕೆಲಕಾಲ ಆತಂಕ

ಹನೂರು: ತಾಲೂಕಿನ ಮಿಣ್ಯಂಗೆ ತೆರಳುವ ಮಾರ್ಗಮಧ್ಯೆಯ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಒಂಟಿ ಸಲಗವೊಂದು ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಕೆಲಕಾಲ ಆತಂಕ ಉಂಟು ಮಾಡಿತು. 
ಈ ಮಾರ್ಗವು ಮಿಣ್ಯಂ, ಗಾಜನೂರು, ಕೊಪ್ಪ, ಹೂಗ್ಯಂ ಹಾಗೂ ಈ ಭಾಗದ ಇನ್ನಿತರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ಅರಣ್ಯ ಪ್ರದೇಶದ ಮೂಲಕ ಹಾದು ಹೋಗಿದೆ. ಈ ಅರಣ್ಯ ಪ್ರದೇಶದಲ್ಲಿ ಆನೆ, ಹುಲಿ ಸೇರಿದಂತೆ ಇನ್ನಿತರ ಕಾಡು ಪ್ರಾಣಿಗಳಿವೆ. ಆದರೆ ಕಾಡಾನೆ ಬೆಳಗಿನ ವೇಳೆಯಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಶುಕ್ರವಾರ ಒಂಟಿ ಸಲಗವೊಂದು ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಇದರಿಂದ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಆತಂಕಕ್ಕೆ ಒಳಗಾದರು. ಆನೆಯ ಚಲನ ವಲನದ ದೃಶ್ಯವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಕಾಡಾನೆ ರಸ್ತೆ ಸಮೀಪದ ಕಾಣಿಸಿಕೊಳ್ಳದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net