ಡಿ.18ರಂದು ಗ್ರಾಮದ ಮಹದೇವಶೆಟ್ಟಿ ಎಂಬುವರ ಜಮೀನಿನಲ್ಲಿ ಮೇಯುತ್ತಿದ್ದ ಎರಡು ಹಸುಗಳನ್ನು ಕೊಂದುಹಾಕಿತ್ತು. ಮರುದಿನ ಈ ಮಾರ್ಗದಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ಚಿರತೆಯ ವಿಡಿಯೋವನ್ನು ವೈರಲ್ ಮಾಡಿದ್ದಾರೆ. ಜನ-ಜಾನುವಾರುಗಳಿಗೆ ಮಾರಕವಾಗಿರುವ ಚಿರತೆಯನ್ನು ಸೆರೆಹಿಡಿದು ಕಾಡಿಗೆ ಬಿಡುವಂತೆ ಸಾರ್ವಜನಿಕರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.