ಶಿಕ್ಷಣಕ್ಕೆ ಒತ್ತು ನೀಡಿದ್ದ ಜ್ಞಾನಿ

ಮಲೆಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು. ಎ.ಈ ರಘು, ಚಂದ್ರಶೇಖರ್, ಜನಾರ್ಧನ್ ಮಹದೇವಸ್ವಾಮಿ ಮತ್ತಿತರರಿದ್ದರು.
ಮಲೆಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು. ಎ.ಈ ರಘು, ಚಂದ್ರಶೇಖರ್, ಜನಾರ್ಧನ್ ಮಹದೇವಸ್ವಾಮಿ ಮತ್ತಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶ್ರೀ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು ಹೇಳಿಕೆ
ಹನೂರು: ವಿಶ್ವ ಸಂಸ್ಥೆಯು ಡಾ.ಬಿ.ಆರ್. ಅಂಬೇಡ್ಕರ್ ಅವರ ಹುಟ್ಟಿದ ದಿನವನ್ನು ವಿಶ್ವ ಜ್ಞಾನ ದಿನವಾಗಿ ಆಚರಿಸುತ್ತಿರುವುದು ಅಂಬೇಡ್ಕರ್ ಅವರಿಗೆ ಸಂದ ಗೌರವ ಎಂದು ಶ್ರೀ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು ತಿಳಿಸಿದರು.
ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಅಸ್ಪಶ್ಯತೆಯ ವಿರುದ್ಧ ಹೋರಾಡಿ ಸಮಾನತೆಯನ್ನು ತಂದು ಕೊಟ್ಟ ಮಹಾ ಮಾನವತಾವಾದಿ ಡಾ.ಬಿ.ಆರ್ ಅಂಬೇಡ್ಕರ್. ದೇಶಕ್ಕೆ ಸಂವಿಧಾನವನ್ನು ನೀಡಿದ ಮಹಾನ್ ಜ್ಞಾನಿ. ಅಖಂಡ ಭಾರತದ ಎಲ್ಲ ಪ್ರಜೆಗಳಿಗೂ ಸಮಾನತೆಯನ್ನು ನೀಡಿದ್ದು, ಪ್ರತಿಯೊಬ್ಬರೂ ಉದ್ಯೋಗವನ್ನು ಪಡೆಯಲು ಇವರೇ ಕಾರಣಕರ್ತರಾಗಿದ್ದಾರೆ. ಇವರು ಹೆಚ್ಚಿನ ಜ್ಞಾನ ಸಂಪಾದಿಸಿದ್ದ ಪರಿಣಾಮ ವಿಶ್ವಸಂಸ್ಥೆಯು ವಿಶ್ವದ ಜ್ಞಾನ ದಿನವಾಗಿ ಆಚರಿಸುತ್ತಿರುವುದು ಮೆಚ್ಚುಗೆಯ ಸಂಗತಿ. ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಳ್ಳಬೇಕು. ಇನ್ನು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದರ ಜತೆಗೆ ಸಂಘಟಿತರಾಗಿ ಕಾನೂನಾತ್ಮಕವಾಗಿ ಹಕ್ಕುಗಳನ್ನು ಪಡೆಯಲು ಹೋರಾಟ ನಡೆಸುವುದರ ಮೂಲಕ ಅಂಬೇಡ್ಕರ್ ಅವರ ಆಶಯದಂತೆ ನಡೆಯಬೇಕು ಎಂದು ತಿಳಿಸಿದರು.
ಪ್ರಾಧಿಕಾರದ ಉಪ ಕಾರ್ಯದರ್ಶಿ ಜಿ.ಎಲ್.ಚಂದ್ರಶೇಖರ್, ನೌಕರರಾದ ಜನಾರ್ದನ್, ಮಹದೇವಸ್ವಾಮಿ, ಮಲ್ಲಿಕಾರ್ಜುನಶಾಸ್ತ್ರಿ, ಮಾದೇಶ್, ಇಂದ್ರೇಶ್ ಹಾಗೂ ಇನ್ನಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net