ತಾಲೂಕಿನ ಒಡೆಯರಪಾಳ್ಯದ ಐವರು ರಾತ್ರಿ 10ರ ವೇಳೆಯಲ್ಲಿ ಗ್ರಾಮದಿಂದ ಲೊಕ್ಕನಹಳ್ಳಿ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಆಂಡಿಪಾಳ್ಯದ ಬಳಿ ಚಾಲಕ ನಿಯಂತ್ರಣ ತಪ್ಪಿದ ಪರಿಣಾಮ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿದೆ. ಸದ್ಯ ಐವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.